Isaiah 42:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
Kannada BSI Bible 2016
ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.
Kannada Bible (KNCL) BSI 2016
ನನ್ನನ್ನೇ ತಡೆಹಿಡಿದೆನು: ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.