Isaiah 42:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
Kannada BSI Bible 2016
ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.
Kannada Bible (KNCL) BSI 2016
ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬೆಟ್ಟಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ; ನದಿಗಳನ್ನು ದ್ವೀಪಗಳನ್ನಾಗಿಯೂ, ಕೆರೆಗಳನ್ನು ಬತ್ತಿಹೋಗುವಂತೆಯೂ ಮಾಡುವೆನು.