Isaiah 42:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
Kannada BSI Bible 2016
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.
Kannada Bible (KNCL) BSI 2016
ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.