Isaiah 42:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
Kannada BSI Bible 2016
ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾವನಿಗೆ ವಿರುದ್ಧವಾಗಿ ನಾವು ದ್ರೋಹ ಮಾಡಿದೆವೋ ಆ ಯೆಹೋವನಲ್ಲವೇ. ಆತನ ಜನರು ಆತನ ಮಾರ್ಗಗಳಲ್ಲಿ ನಡೆಯಲೊಲ್ಲದೆ ಆತನ ಉಪದೇಶವನ್ನು ಕೇಳದೆ ಹೋದರಷ್ಟೆ.
Kannada Bible (KNCL) BSI 2016
ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.