Isaiah 42:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
Kannada BSI Bible 2016
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.
Kannada Bible (KNCL) BSI 2016
ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.