Isaiah 42:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡುಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆಮಾಡಿ ಸತ್ಯವನ್ನು ಕಂಡುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
Kannada BSI Bible 2016
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಜ್ಜಿದ ದಂಟನ್ನು ಮುರಿದು ಹಾಕದೆ ಕಳೆಗುಂದಿದ ದೀಪವನ್ನು ನಂದಿಸದೆ ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
Kannada Bible (KNCL) BSI 2016
ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ನಂಬಿಕೆಯಿಂದ ನ್ಯಾಯವನ್ನು ಹೊರತರುತ್ತಾನೆ.