Isaiah 42:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
Kannada BSI Bible 2016
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
Kannada Bible (KNCL) BSI 2016
ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”