Isaiah 42:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: “ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
Kannada BSI Bible 2016
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -
Kannada Bible (KNCL) BSI 2016
ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.