Isaiah 42:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Kannada BSI Bible 2016
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,”