Isaiah 42:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
Kannada BSI Bible 2016
ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.
Kannada Bible (KNCL) BSI 2016
ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.