Isaiah 42:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Kannada BSI Bible 2016
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Kannada Bible (KNCL) BSI 2016
ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.