Isaiah 43:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
Kannada BSI Bible 2016
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.
Kannada Bible (KNCL) BSI 2016
ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು: ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.