Isaiah 43:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
Kannada BSI Bible 2016
ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು;
Kannada Bible (KNCL) BSI 2016
ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ, ನಾನೇ ರಕ್ಷಣೆಯನ್ನು ಪ್ರಕಟಿಸಿ, ತೋರಿಸಿದ್ದೇನೆ. ಆದ್ದರಿಂದ ನೀವು ನನ್ನ ಸಾಕ್ಷಿಗಳು,” “ನಾನೇ ದೇವರು ಎಂದು ಯೆಹೋವ ದೇವರು ನುಡಿಯುತ್ತಾರೆ.