Isaiah 43:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
Kannada BSI Bible 2016
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.
Kannada Bible (KNCL) BSI 2016
“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.