Isaiah 43:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,
Kannada BSI Bible 2016
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ,
Kannada Bible (KNCL) BSI 2016
ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ: