Isaiah 43:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
Kannada BSI Bible 2016
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.
Kannada Bible (KNCL) BSI 2016
ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.