Isaiah 43:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
Kannada BSI Bible 2016
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ
Kannada Bible (KNCL) BSI 2016
ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.