Isaiah 43:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
Kannada BSI Bible 2016
ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವ; ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
Kannada Bible (KNCL) BSI 2016
ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.