Isaiah 43:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
Kannada BSI Bible 2016
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;
Kannada Bible (KNCL) BSI 2016
ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.