Isaiah 44:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.
Kannada BSI Bible 2016
ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.
Kannada Bible (KNCL) BSI 2016
ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.