Isaiah 44:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.
Kannada BSI Bible 2016
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು.
Kannada Bible (KNCL) BSI 2016
ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.