Isaiah 44:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
Kannada BSI Bible 2016
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.
Kannada Bible (KNCL) BSI 2016
ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.