Isaiah 44:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
Kannada BSI Bible 2016
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
Kannada Bible (KNCL) BSI 2016
“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.