Isaiah 44:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
Kannada BSI Bible 2016
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
Kannada Bible (KNCL) BSI 2016
ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.