Isaiah 44:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
Kannada BSI Bible 2016
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?
Kannada Bible (KNCL) BSI 2016
ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು: “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.