Isaiah 44:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
Kannada BSI Bible 2016
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ
Kannada Bible (KNCL) BSI 2016
ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ