Isaiah 44:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
Kannada BSI Bible 2016
ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;
Kannada Bible (KNCL) BSI 2016
‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;