Isaiah 44:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.
Kannada BSI Bible 2016
ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.
Kannada Bible (KNCL) BSI 2016
ಕೋರೆಷನಿಗೆ ಇಂತೆನ್ನುವೆನು ನಾನು: ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’