Isaiah 44:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಾಯಾರಿದ ಜನರಿಗೆ ನಾನು ನೀರು ಹೊಯ್ಯುವೆನು. ಬಂಜರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
Kannada BSI Bible 2016
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.
Kannada Bible (KNCL) BSI 2016
ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.