Isaiah 44:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ “ಬಂಡೆ”ಯೂ ಇಲ್ಲ. ನಾನೊಬ್ಬನೇ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
Kannada BSI Bible 2016
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
Kannada Bible (KNCL) BSI 2016
ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”