Isaiah 45:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
Kannada BSI Bible 2016
ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
Kannada BSI JV (ಕನ್ನಡ ಸತ್ಯವೇದವು J.V. (BSI))
[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು: “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?