Isaiah 45:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
Kannada BSI Bible 2016
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.
Kannada Bible (KNCL) BSI 2016
ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು: ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ: “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.