Isaiah 45:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’“ ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
Kannada BSI Bible 2016
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;
Kannada Bible (KNCL) BSI 2016
“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.