Isaiah 45:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
Kannada BSI Bible 2016
ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
Kannada Bible (KNCL) BSI 2016
ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.