Isaiah 45:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
Kannada BSI Bible 2016
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
Kannada Bible (KNCL) BSI 2016
ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.