Isaiah 46:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
Kannada BSI Bible 2016
ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.
Kannada Bible (KNCL) BSI 2016
ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.