Isaiah 46:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
Kannada BSI Bible 2016
ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;
Kannada Bible (KNCL) BSI 2016
“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.