Isaiah 46:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
Kannada BSI Bible 2016
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.
Kannada Bible (KNCL) BSI 2016
ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.