Isaiah 47:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
Kannada BSI Bible 2016
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.
Kannada Bible (KNCL) BSI 2016
ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.