Isaiah 47:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
Kannada BSI Bible 2016
ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.
Kannada Bible (KNCL) BSI 2016
ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”