Isaiah 47:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
Kannada BSI Bible 2016
ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
Kannada Bible (KNCL) BSI 2016
ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.