Isaiah 47:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
Kannada BSI Bible 2016
ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.
Kannada Bible (KNCL) BSI 2016
ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.