Isaiah 47:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.
Kannada BSI Bible 2016
ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರಮಾಡಿದವರೆಲ್ಲರೂ ಚದರಿ ತಮ್ಮ ತಮ್ಮ ಪ್ರಾಂತಕ್ಕೆ ಹೋಗಿಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
Kannada Bible (KNCL) BSI 2016
ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು. ನಿನ್ನ ಬಾಲ್ಯ ಪ್ರಾಯದಿಂದ ನಿನ್ನ ವರ್ತಕರು ಚದರಿ, ತಮ್ಮ ತಮ್ಮ ಪ್ರಾಂತಕ್ಕೆ ಹೋಗಿ ಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.