Isaiah 47:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
Kannada BSI Bible 2016
ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!
Kannada Bible (KNCL) BSI 2016
ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.