Isaiah 47:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
Kannada BSI Bible 2016
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.
Kannada Bible (KNCL) BSI 2016
“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.