Isaiah 47:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
Kannada BSI Bible 2016
ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -
Kannada Bible (KNCL) BSI 2016
ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.