Isaiah 47:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
Kannada BSI Bible 2016
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
Kannada Bible (KNCL) BSI 2016
ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.