Isaiah 48:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
Kannada BSI Bible 2016
ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.
Kannada Bible (KNCL) BSI 2016
ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು.