Isaiah 48:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
Kannada BSI Bible 2016
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.
Kannada Bible (KNCL) BSI 2016
ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು: “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.