Isaiah 48:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
Kannada BSI Bible 2016
ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು.
Kannada Bible (KNCL) BSI 2016
ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.